×
Ad

ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅವಧಿ ವಿಸ್ತರಣೆ

Update: 2022-12-06 19:17 IST

ಉಡುಪಿ, ಡಿ.6: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು  ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿಯುಸಿ, ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಫ್ರೂಟ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು  ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News