ಗ್ರಾಮ ಲೆಕ್ಕಿಗರು ಇನ್ನು ಮುಂದೆ ‘ಗ್ರಾಮ ಆಡಳಿತ ಅಧಿಕಾರಿ’: ಸರಕಾರ ಆದೇಶ

Update: 2022-12-06 16:16 GMT

ಬೆಂಗಳೂರು, ಡಿ.6: ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೆ ಬದಲಾವಣೆ ಇಲ್ಲದೆ ಗ್ರಾಮಲೆಕ್ಕಿಗರು ಎಂಬ ಪದನಾಮವನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಮರು ಪದನಾಮೀಕರಿಸಿ ಸರಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕ ಕ್ರಮ ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Similar News