ಉಡುಪಿ ಜಿಲ್ಲಾಡಳಿತದಿಂದ ಡಾ.ಅಂಬೇಡ್ಕರ್‌ಗೆ ಗೌರವಾರ್ಪಣೆ

Update: 2022-12-06 15:04 GMT

ಉಡುಪಿ, ಡಿ.6:  ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿ ಜಿಲ್ಲಾಡಳಿತದ ವತಿಯಿಂದ ಗೌರವ ಅರ್ಪಿಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Similar News