ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2022-12-06 15:08 GMT

ಉಡುಪಿ, ಜ.6: ವಿಪರೀತ ಕುಡಿತದ ಚಟ ಹೊಂದಿದ್ದ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ನಿವಾಸಿ ಅಶೋಕ ನಾಯ್ಕ (34) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.5ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದ ಉಪ್ಪೂರು ಕೊಳಲಗಿರಿಯ ಯಲ್ಲಪ್ಪ ಡೊಂಬರ ಎಂಬವರ ಮಗ ವಿಜಯ (22) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಡಿ.5ರಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News