ಡಿ.8-10: ಪಿಯು ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ

Update: 2022-12-06 15:12 GMT

ಉಡುಪಿ, ಡಿ.6: ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಕುಂದಾಪುರ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ, ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ಸುಜ್ಞಾನ್ ಎಜು ಕೇಶನಲ್ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಡಿ.8ರಿಂದ 10ರವರೆಗೆ ಸುಣ್ಣಾರಿ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ರಾಜ್ಯದ 33 ಜಿಲ್ಲೆಗಳ ಬಾಲಕ ಮತ್ತು ಬಾಲಕಿಯರ ಒಟ್ಟು 66 ತಂಡಗಳು ಇದರಲ್ಲಿ ಭಾಗವಹಿಸಲಿದ್ದು, ಸುಮಾರು 800 ಕ್ರೀಡಾಪಟುಗಳು, 66 ತಂಡಗಳ ವ್ಯವಸ್ಥಾಪಕರು ಡಿ.8ರಂದು ಜಿಲ್ಲೆಗೆ ಆಗಮಿಸಲಿರುವರು ಎಂದರು.

ಬಾಲಕರ ವಸತಿಗಾಗಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಾಗೂ ಬಾಲಕಿಯರ ವಸತಿಗಾಗಿ ಸುಣ್ಣಾರಿ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಂದ್ಯಾಟಕ್ಕಾಗಿ ಒಟ್ಟು ಏಳು ಕ್ರೀಡಾಂಗಣದ ವ್ಯವಸ್ಥೆ ಮಾಡಲಾ ಗಿದೆ. 100 ಜನ ತಾಂತ್ರಿಕ ಅಧಿಕಾರಿಗಳು, 150 ಜನ ಸ್ವಯಂ ಸೇವಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಪಂದ್ಯಾಟದಲ್ಲಿ 19ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಷ್ಟ್ರಮಟ್ಟದ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಡಿ.8ರಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ಅಪರಾಹ್ನ 3ಗಂಟೆಗೆ ಪುರ ಮೆರವಣಿಗೆ ಹೊರಡಲಿದ್ದು, ಪುರ ಮೆರವಣಿಗೆಯನ್ನು ವೈದ್ಯ ಡಾ.ಉಮೇಶ್ ಪುತ್ರನ್ ಉದ್ಘಾಟಿಸಲಿರುವರು. ಸಂಜೆ 5.30ಕ್ಕೆ ಪಂದ್ಯಾಟವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಉದ್ಘಾಟಿಸಲಿರುವರು. ಡಿ.10ರಂದು ಅಪರಾಹ್ನ 3ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಹಿಸಲಿರುವರು.

ಸುದ್ದಿಗೋಷ್ಠಿಯಲ್ಲಿ ಸುಣ್ಣಾರಿ ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ ಶೆಟ್ಟಿ, ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ಭರತ್ ಶೆಟ್ಟಿ, ಜೀವನ ಕುಮಾರ್ ಶೆಟ್ಟಿ, ಮಂಜುನಾಥ ಜೋಗಿ, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

Similar News