ನಾಡದೋಣಿಗೆ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಆಗ್ರಹ

Update: 2022-12-06 15:14 GMT

ಉಡುಪಿ, ಡಿ.6: ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಕಳೆದ 10 ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆ ಗೊಂಡಿಲ್ಲ. ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತುತಿ ಗಿಲ್‌ನೆಟ್ ಮೀನುಗಾರರಿಗೆ ಪ್ರತಿ ತಿಂಗಳು 300 ಲೀಟರ್ ಸೀಮೆಎಣ್ಣೆ ನೀಡುತ್ತಿದ್ದು ಈಗ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ 5 ಶಾಸಕರು, ಒಬ್ಬ ಸಂಸದೆ ಇದ್ದರೂ ಕೂಡ ಮೀನುಗಾರರ ಪ್ರಾಮಾಣಿಕ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲರಾಗಿ ದ್ದಾರೆ. ಉಸ್ತುವಾರಿ ಸಚಿವರಾಗಲಿ, ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳಾಗಿ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸದೇ ನಿರ್ಲಕ್ಷ್ಯ ಧೋರಣೆ ಮುಂದುವರಿಸಿ ರುವುದು ನಿಜಕ್ಕೂ ಖೇದಕರವಾಗಿದೆ.

ಸೀಮೆಎಣ್ಣೆ ಕೊರೆತೆಯಿಂದಾಗಿ ಮೀನುಗಾರರಿಗೆ ಮೀನುಗಾರಿಕೆ ನಡೆಸಲು ಕಷ್ಟಕರವಾಗುತ್ತಿದ್ದು ಇದರಿಂದಾಗಿ ಸಣ್ಣ ಮೀನುಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಆದ್ದರಿಂದ ಸರಕಾರವು ತಕ್ಷಣ ಮೀನುಗಾರರ ಈ ಸಮಸ್ಯೆಗೆ ಸ್ಪಂದಿಸಿ ನಾಡ ದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಬೇಡಿಕೆಗಳನ್ನು ಈಡೇರಿಸಬೇಕು. 10 ದಿನದೊಳಗೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರೊಂದಿಗೆ ಸೇರಿ ಹೋರಾಟ ನಡೆಸಲಾಗು ವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Similar News