400 ಅಡಿ ಆಳದ ಕೊಳವೆಬಾವಿಗೆ ಬಿದ್ದ ಎಂಟು ವರ್ಷದ ಬಾಲಕ; ರಕ್ಷಣಾ ಕಾರ್ಯಾಚರಣೆ ಆರಂಭ

Update: 2022-12-06 15:45 GMT

ಬೇತುಲ್, ಡಿ.6: ಎಂಟು ವರ್ಷದ ಬಾಲಕನೊಬ್ಬ ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ 400 ಅಡಿ ಆಳದ ಕೊಳವೆಬಾವಿಯಲ್ಲಿ (borewell) ಬಿದ್ದಿರುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಂಡವಿ ಗ್ರಾಮದಲ್ಲಿ ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕ ತನ್ಮಯ್ ದಿಯಾವರ್ ಮೈದಾನದಲ್ಲಿ ಆಟವಾಡುತ್ತಿದ್ದಾಗ ಇತ್ತೀಚೆಗೆ ಅಗೆದಿದ್ದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಆತ್ನೇರ್ ಪೊಲೀಸ್ ಠಾಣೆ ಪ್ರಭಾರಿ ಅನಿಲ್ ಸೋನಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಮಣ್ಣು ಅಗೆಯುವ ಯಂತ್ರಗಳನ್ನು ತರಲಾಗಿದೆ, ಬಾಲಕನಿಗೆ ಆಮ್ಲಜನಕ ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮಗು ಬೋರ್‌ವೆಲ್‌ನಲ್ಲಿ ಸುಮಾರು 60 ಅಡಿ ಆಳದಲ್ಲಿ ಸಿಲುಕಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Similar News