ಉಡುಪಿ: ಕಾಂಗ್ರೆಸ್‌ನಿಂದ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ

Update: 2022-12-06 15:49 GMT

ಉಡುಪಿ, ಡಿ.6: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಮಂಗಳವಾರ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೬ನೇ ಮಹಾ ಪರಿನಿರ್ವಾಣ ದಿನವನ್ನು ಬ್ರಹ್ಮಗಿರಿ ಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ನಾಗೇಶ್ ಉದ್ಯಾವರ, ಪ.ಜಾ.ವಿಭಾಗದ ಜಿಲ್ಲಾದ್ಯಕ್ಷ  ಜಯ ಕುಮಾರ್, ಕಾಪು ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್‌ಚಂದ್ರ ಅಡ್ವೆ ಮುಂತಾದವರು ಭಾಗವಹಿಸಿದ್ದರು.

ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕದ ರಾಜ್ಯ ಸಂಚಾಲಕ ಭಾಸ್ಕರ್  ಪಡುಬಿದ್ರಿ  ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಪ. ಜಾ. ವಿಭಾಗದ ಜಿಲ್ಲಾದ್ಯಕ್ಷ ಜಯಕುಮಾರ್ ಬಾಬಾ ಸಾಹೇಬರ ವಿಚಾರಧಾರೆಯನ್ನು ಹಂಚಿಕೊಂಡರು. ಉಮೇಶ್ ಬನ್ನಂಜೆ ವಂದಿಸಿ, ರಾಜ್ಯ ಪದಾಧಿಕಾರಿ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾ:  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರ ೬೬ನೇ ಪರಿನಿರ್ವಾಣ ದಿನವನ್ನು ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಆಚರಿಸಲಾಯಿತು.

ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ ಅಧ್ಯಕ್ಷತೆ ವಹಿಸಿದ್ದರು. ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಆನಂದ ಮಟಪಾಡಿ, ಪ್ರಮುಖರಾದ ಹರಿದಾಸ್ ಕೆಮ್ಮಣ್ಣು, ಚಂದ್ರಶೇಖರ ಪ್ರಭು ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ಸ್ವಾಗತಿಸಿದರೆ, ಸದಾನಂದ ಕೈಪುಂಜಾಲು ನಿರೂಪಿಸಿ ವಂದಿಸಿದರು.

Similar News