ಮಹಾರಾಷ್ಟ್ರದ ಬಸ್ ಗಳ ಮೇಲೆ ದಾಳಿಗೆ ದೇವೇಂದ್ರ ಫಡ್ನವೀಸ್ ತೀವ್ರ ಖಂಡನೆ

ನೆರೆರಾಜ್ಯದ ವಾಹನಗಳಿಗೆ ರಕ್ಷಣೆ: ಬೊಮ್ಮಾಯಿ ಭರವಸೆ

Update: 2022-12-06 16:43 GMT

ಮುಂಬೈ,ಡಿ.6:  ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ(Maharashtra)ದ ನೋಂದಣಿ ಸಂಖ್ಯೆಯ ವಾಹನಗಳ ಮೇಲೆ ದಾಳಿ ನಡೆದಿರುವುದಕ್ಕಾಗಿ  ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis)ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai)ಅವರಿಗೆ ತಮ್ಮ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ ಅವರು ಈ ಕೃತ್ಯವನ್ನು ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲಾ ವಾಹನಗಳಿಗೂರಕ್ಷಣೆ ನೀಡಲಾಗುವುದೆಂದು ಭರವಸೆ ನೀಡಿದ್ದಾರೆ.

ಪುಣೆಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಲಾರಿಯೊಂದರ ಮೇಲೆ ಕನ್ನಡ ಪರ ಕಾರ್ಯಕರ್ತರ ಗುಂಪೊಂದು ಕಲ್ಲುಗಳನ್ನೆಸೆದಿತ್ತು.  ಇದರಿಂದಾಗಿ ಲಾರಿಯ ಕಿಟಕಿ ಗಾಜುಗಳು ಹಾಗೂ ಎದುರು ಭಾಗದ ಕನ್ನಡಿ  ಒಡೆದು ವಾಹನವು ತೀವ್ರವಾಗಿ ಜಖಂಗೊಂಡಿತ್ತು.

ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರು ಮಂಗಳವಾರ ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಘೋಷಿಸಿದ್ದ ಹಿನ್ನೆಲೆಯಲ್ಲಿ ಗಡಿಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ತಲೆದೋರಿತ್ತು.

ಈ ಮಧ್ಯೆ ಮಹಾರಾಷ್ಟ್ರ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲು 400ಕ್ಕೂ ಅಧಿಕ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಧಾರವಾಡ ಜಿಲ್ಲೆಯಿಂದ ಬೆಳಗಾವಿಗೆ ಧಾವಿಸಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಪ್ರದೇಶದ ಎಲ್ಲಾ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತನ್ನು ಬಿಗಿಗೊಳಿಸಲಾಗಿದೆ.

Similar News