ಬೆಂಗಳೂರು | ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ರಚನೆ: ನಿರ್ಣಯ

Update: 2022-12-06 17:53 GMT

ಬೆಂಗಳೂರು, ಡಿ. 6: ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಲೈಂಗಿಕ ಅಲ್ಪಸಂಖ್ಯಾತರ ಪ್ರಗತಿಗಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಒಕ್ಕೂಟ ರಚನೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಮಂಗಳವಾರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿ ನಿರ್ವಾಣ ದಿನದಂದು ನಡೆದ ಸಭೆಯಲ್ಲಿ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪಸಂಖ್ಯಾತರು ಪಾಲ್ಗೊಂಡು ಒಕ್ಕೂಟ ರಚನೆ ಮಾಡುವುದಾಗಿ ಪ್ರಕಟಿಸಿದರು.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಲೈಂಗಿಕ ಅಲ್ಪಸಂಖ್ಯಾತರ ಏಳಿಗೆ, ಸ್ವಾಭಿಮಾನ, ಗೌರವದ ಬದುಕಿಗೆ ಒಕ್ಕೂಟ ಆದ್ಯತೆ ನೀಡಲಿದೆ.ಈ ವರ್ಗದವರಿಗೆ ಸಮಾಜದಲ್ಲಿ ಗೌರವ ಸಿಗಬೇಕು ಹಾಗೂ ಅವರ ಸ್ವಾಭಿಮಾನದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

Similar News