ಕಲಬುರಗಿ | ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಕಾರು ಢಿಕ್ಕಿ: ಸಿಂದಗಿ ಸಿಪಿಐ ಹಾಗೂ ಪತ್ನಿ ಮೃತ್ಯು

Update: 2022-12-07 08:38 GMT

ಕಲಬುರಗಿ, ಡಿ.7: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಕಾರು ಢಿಕ್ಕಿ (Road Accident) ಹೊಡೆದ ಪರಿಣಾಮ ಸಿಂಧಗಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್‍ನಲ್ಲಿ ನಡೆದಿದೆ.

ಸಿಂದಗಿ ಸಿಪಿಐ ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಮೃತಪಟ್ಟವರು.  

 ಇವರು ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಟ್ರಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಲಾರಿಯೊಳಗೆ ನುಗ್ಗಿದೆ. ಗಂಭೀರ ಗಾಯಗೊಂಡಿದ್ದ ರವಿ ಉಕ್ಕುಂದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News