ಕೋಟೇಶ್ವರ ಕೋಟಿಲಿಂಗೇಶ್ವರ ರಥೋತ್ಸವ: ಡಿ.8-9ರಂದು ಮದ್ಯ ಮಾರಾಟ ನಿಷೇಧ

Update: 2022-12-07 14:54 GMT

ಉಡುಪಿ, ಡಿ.7: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮ ಡಿ.9ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕೋಟೇಶ್ವರ, ಹಂಗಳೂರು ಮತ್ತು ಗೋಪಾಡಿ ಗ್ರಾಮಗಳಲ್ಲಿ ಡಿ.8ರ ಬೆಳಗ್ಗೆ 6ರಿಂದ ಡಿ.9ರ ರಾತ್ರಿ 12ರವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.  

Similar News