ಬೆಂಗಳೂರಿನಲ್ಲಿ ರಸ್ತೆ ಅಪಘಾತ; ಕೊಡಗಿನ ಓರ್ವ ಸೇರಿ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Update: 2022-12-07 21:53 IST
ಮಡಿಕೇರಿ ಡಿ.7 : ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಯುವಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ಬೆಂಗಳೂರಿನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಾಲಿಬೆಟ್ಟದ ಹಮೀದ್ ಎಂಬುವವರಪುತ್ರ ಆದಿಲ್ (24) ಹಾಗೂ ಸ್ನೇಹಿತ ಕೇರಳ ಮಲಪುರಂ ಜಿಲ್ಲೆಯ ಮನ್ನಾರ್ ಕಾಡ್ ಗ್ರಾಮದ ಸಮಿವುಲ್ಲಾ (27) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ ಮತ್ತೊಂದು ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆನ್ನಲಾಗಿದೆ.
ಆದಿಲ್ ಹಾಗೂ ಸಮಿವುಲ್ಲ ಇಬ್ಬರು ಒಂದೇ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಬೆಂಗಳೂರು ಕಾಮಾಕ್ಷಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.