ಜಮ್ಮು ಕಾಶ್ಮೀರದಲ್ಲಿ ಮೂವರು ಕಾಶ್ಮೀರ ಪಂಡಿತರ ಸಹಿತ 14 ಮಂದಿ ಅಲ್ಪಸಂಖ್ಯಾತರ ಹತ್ಯೆ: ಕೇಂದ್ರ ಸರಕಾರ

Update: 2022-12-07 17:17 GMT

 ಹೊಸದಿಲ್ಲಿ : ಜಮ್ಮು ಹಾಗೂ ಕಾಶ್ಮೀರದಲ್ಲಿ ಈ ವರ್ಷ ನವೆಂಬರ್ 30ರ ವರೆಗೆ ಮೂವರು ಕಾಶ್ಮೀರಿ ಪಂಡಿತರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 14 ಮಂದಿ ಹತ್ಯೆಯಾಗಿದ್ದಾರೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ಈ ವಲಯದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ 2022 ಜನವರಿ 30ರಿಂದ 2022 ನವೆಂಬರ್ 30ರ ನಡುವೆ ಮೂವರು ಕಾಶ್ಮೀರಿ ಪಂಡಿತರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 14 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರದ ಗೃಹ ವ್ಯವಹಾರಗಳ ಸಹಾಯಕ ಸಚಿವ ನಿತ್ಯಾನಂದ ರಾಯ್ (Nithyananda Roy)ಅವರು ರಾಜ್ಯ ಸಭೆಗೆ ತಿಳಿಸಿದರು.

ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತರಿಗೆ ಮುಖ್ಯವಾಗಿ ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆಯೇ ? ಎಂದು ಸಮಾಜವಾದಿ ಪಕ್ಷದ ಸದಸ್ಯ ಜಾವೇದ್ ಅಲಿ ಖಾನ್ ಅವರ ಪ್ರಶ್ನೆಗೆ ರಾಯ್ ಅವರು ಈ ಪ್ರತಿಕ್ರಿಯೆ ನೀಡಿದರು.

Similar News