ಧಾರವಾಡ: ನೇಣುಬಿಗಿದ ಸ್ಥಿತಿಯಲ್ಲಿ ಯುವಕ-ಯುವತಿಯ ಮೃತದೇಹ ಪತ್ತೆ

Update: 2022-12-07 18:24 GMT

ಧಾರವಾಡ ನವಲಗುಂದ:  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕ-ಯುವತಿಯ ಮೃತದೇಹ ಪತ್ತೆಯಾಗಿದೆ.

ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿನ ಖಾಸಗಿ ಲಾಡ್ಜ್‌ನಲ್ಲಿ ಯುವಕ, ಯುವತಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಬುಧವಾರ ಸಂಜೆ ನಡೆದಿದೆ.

ಈ ಬಗ್ಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

ಮೃತ ದೇಹಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Similar News