ಹಿಮಾಚಲಪ್ರದೇಶದಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಗೆ ಜಯ

Update: 2022-12-08 06:20 GMT

ಶಿಮ್ಲಾ: ಹಿಮಾಚಲಪ್ರದೇಶದಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹಾಗೂ ರಾಕೇಶ್ ಕುಮಾರ್ ಜಯ ಸಾಧಿಸುವ ಮೂಲಕ ಬಿಜೆಪಿ ತನ್ನ ಖಾತೆ ತೆರೆದಿದೆ.

ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಸೆರಾಜ್ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ. ರಾಕೇಶ್ ಕುಮಾರ್ ಗೆ ಸುಂದರ್ ನಗರ ಕ್ಷೇತ್ರದಿಂದ ಜಯ ದಾಖಲಿಸಿದ್ದಾರೆ.

ಈಗಿನ ಟ್ರೆಂಡ್ ಪ್ರಕಾರ ಕಾಂಗ್ರೆಸ್ 39 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಬಹುಮತದ ಸಂಖ್ಯೆ(35)ದಾಟಿದೆ. 26ರಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದೆ. ಪಕ್ಷೇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

Similar News