×
Ad

150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ: ಗುಜರಾತ್ ಬಿಜೆಪಿ ಪಾಳಯದಲ್ಲಿ ಭಾರೀ ಸಂಭ್ರಮ

Update: 2022-12-08 11:56 IST

ಅಹಮದಾಬಾದ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನಗಳ ಭಾರಿ ಮುನ್ನಡೆ ಸಾಧಿಸಿರುವುದರಿಂದ ಗುಜರಾತ್ ಬಿಜೆಪಿ ಪಾಳಯದಲ್ಲಿ ಭಾರಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಮತ ಎಣಿಕೆ ಕಾರ್ಯವು ಪ್ರಗತಿಯಲ್ಲಿದೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಾಲಯಗಳ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಮುನ್ನಡೆಯನ್ನು ಭಾರಿ ಹರ್ಷೋದ್ಗಾರಗಳೊಂದಿಗೆ ಸಂಭ್ರಮಿಸಿದರು.

ಮತ ಎಣಿಕೆ ಕಾರ್ಯವು ಪ್ರಗತಿಯಲ್ಲಿದ್ದು ಬಿಜೆಪಿ ಈಗಾಗಲೇ 150 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತ್ತೀಚಿನ ಸುದ್ದಿಗಳ ಪ್ರಕಾರ 152 ಸ್ಥಾನಗಳಿಗೆ ತನ್ನ ಮುನ್ನಡೆಯನ್ನು ಹಿಗ್ಗಿಸಿಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್ ಕೇವಲ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 57 ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸಿದೆ. ಈ ನಡುವೆ ಆಪ್ ಪಕ್ಷವು ತನ್ನ ಪ್ರಥಮ ಚುನಾವಣೆಯಲ್ಲಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Similar News