ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮುಂದುವರಿಕೆ: ಅಮಿತ್ ಶಾ

Update: 2022-12-08 09:08 GMT

ಹೊಸದಿಲ್ಲಿ: ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮುಂದುವರಿಯಲಿದ್ದು, ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

 ಪ್ರಧಾನಿ ನರೇಂದ್ರ ಮೋದಿ  ಅವರು  ಚುನಾವಣಾ ಪೂರ್ವದಲ್ಲಿ ತಮ್ಮ ತವರು ರಾಜ್ಯದಲ್ಲಿ 30 ಕ್ಕೂ ಹೆಚ್ಚು ರ್ಯಾಲಿಗಳನ್ನು ಮುನ್ನಡೆಸಿದ್ದಾರೆ.

ಗುರುವಾರ  ಸಂಜೆ 6 ಗಂಟೆಗೆ ದಿಲ್ಲಿಯ ಪ್ರಧಾನ ಕಚೇರಿಯಲ್ಲಿ ತಮ್ಮ ಪಕ್ಷದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ.

Similar News