ದೇಶದಲ್ಲಿ ಮೋದಿ ಪರ ಅಲೆ ಮತ್ತೆ ಸಾಬೀತು: ನಳಿನ್ ಕುಮಾರ್ ಕಟೀಲ್

ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶ

Update: 2022-12-08 12:44 GMT

ಬೆಂಗಳೂರು, ಡಿ.8: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇರುವುದನ್ನು ಗುಜರಾತ್ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಫಲಿತಾಂಶವು ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ರಾವಣ, ಭಸ್ಮಾಸುರ ಎಂದು ಟೀಕಿಸಿದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಮೋದಿ ನೇತೃತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿ ಸಾಧಿಸುತ್ತಿದೆ. ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು, ಸರಕಾರ ರಚಿಸುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ಬಾರಿ ಮತ್ತೆ ಗುಜರಾತ್‍ನಲ್ಲಿ ಗರಿಷ್ಠ ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಕಾಂಗ್ರೆಸ್ ಪಕ್ಷವು ಅಲ್ಲಿ ಕನಿಷ್ಠ ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಆಂತರಿಕ ಜಗಳದಿಂದಾಗಿ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವು ನೆಲಕಚ್ಚುವ ಸ್ಥಿತಿಗೆ ತಲುಪುತ್ತದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Similar News