ಮಂಗಳೂರು : ಬಸ್ ಢಿಕ್ಕಿ; ಗಾಯಾಳು ಮಹಿಳೆ ಮೃತ್ಯು

Update: 2022-12-08 14:22 GMT

ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ಮಹಿಳೆ.

ಡಿ.3ರಂದು ಮುಸ್ಸಂಜೆ ಸುಮಾರು 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿಕೊಂಡು ಬಂದ ಬಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ತನ್ನ ತಾಯಿಯನ್ನು ನೋಡಲು ಮಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Similar News