×
Ad

ಬೆಂಗಳೂರು | ಕನ್ನಡ ಪರ ಸಂಘಟನೆಗಳಿಂದ ಬ್ಯಾಂಕ್ ಆಫ್ ಮಹಾರಾಷ್ಟ್ರಕ್ಕೆ ಮುತ್ತಿಗೆ ಯತ್ನ

Update: 2022-12-09 11:51 IST

ಬೆಂಗಳೂರು, ಡಿ.9: ಬೆಳಗಾವಿ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು  ಖಂಡಿಸಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ಬೆಂಗಳೂರಿನ ಗಾಂಧಿನಗರದಲ್ಲಿನ ಬ್ಯಾಂಕ್ ಆಫ್ ಮಹಾರಾಷ್ಟ್ರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೆಜೆಸ್ಟಿಕ್ ಬಳಿಯ ಗಾಂಧಿ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕ್ ಕಚೇರಿಗೆ ಮುತ್ತಿಗೆ ಹಾಕಲು ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.

ಕೂಡಲೇ ರಾಜ್ಯ ಸರ್ಕಾರ ಎಂಇಎಸ್ ಮತ್ತು ಶಿವಸೇನಾ ಪುಂಡರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ತಾರಕಕ್ಕೇರಿದ ಬೆಳಗಾವಿ ಗಡಿ ವಿವಾದ: ಕರ್ನಾಟಕಕ್ಕೆ ಬಸ್‌ ಸೇವೆ ಸ್ಥಗಿತಗೊಳಿಸಿದ MSRTC

Similar News