ಐಒಎ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ. ಉಷಾ ನಾಳೆ ಅಧಿಕೃತವಾಗಿ ಆಯ್ಕೆ

Update: 2022-12-09 09:19 GMT

ಹೊಸದಿಲ್ಲಿ, ಡಿ 9 :  ಶನಿವಾರ ನಡೆಯಲಿರುವ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ. ಉಷಾ PT Usha ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದು, ದೇಶದ ಕ್ರೀಡಾ ಆಡಳಿತದಲ್ಲಿ ಹೊಸ ಶಕೆಯನ್ನು ಆರಂಭಿಸಲಿದ್ದಾರೆ.

 ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಹಾಗೂ  1984 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ 400 ಮೀ ಹರ್ಡಲ್ಸ್ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿರುವ  58 ವರ್ಷದ ಉಷಾ ಸುಪ್ರೀಂ ಕೋರ್ಟ್ ನೇಮಿಸಿದ ನಿವೃತ್ತ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಮೇಲ್ವಿಚಾರಣೆಯಲ್ಲಿ ನಡೆಯುವ ಚುನಾವಣೆಯಲ್ಲಿ ಉನ್ನತ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗುತ್ತದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಐಒಎ ಚುನಾವಣೆಗಳನ್ನು ಈ ತಿಂಗಳು ನಡೆಸದಿದ್ದರೆ ಅಮಾನತುಗೊಳಿಸುವ ಸಾಧ್ಯತೆಯ ಕುರಿತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಎಚ್ಚರಿಕೆಯನ್ನು ನೀಡಿತ್ತು.

Similar News