ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Update: 2022-12-09 13:13 GMT

ಉಡುಪಿ, ಡಿ.9: ಪುತ್ತೂರು ಗ್ರಾಮದ ಎಲ್‌ವಿಟಿ ದೇವಸ್ಥಾನದ ಬಳಿಯ ಮನೆಯೊಂದಕ್ಕೆ ಡಿ.8ರಂದು ಬೆಳಗ್ಗೆ ನುಗ್ಗಿದ ಕಳ್ಳರು, ಸಾವಿರಾರು ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಪೂಜಾ ಸಾಲ್ಯಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಮ್ ನಲ್ಲಿನ ಕಾಪಾಟಿನಲ್ಲಿದ್ದ ಒಟ್ಟು 20 ಗ್ರಾಂ ತೂಕದ ಚಿನ್ನದ ಬಳೆ ಹಾಗೂ ಚಿನ್ನದ ಪೆಂಡೆಂಟ್ ಕಳವು ಮಾಡಿಕೊಂಡು ಹೋಗಿದ್ದಾರೆ. ಇವುಗಳ ಒಟ್ಟು ಮೌಲ್ಯ  96 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News