ಉಡುಪಿ: ಡಿ. 15ರಂದು ಉದ್ಯೋಗ ಮೇಳ

Update: 2022-12-09 14:04 GMT

ಉಡುಪಿ, ಡಿ.9: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15ರಂದು ಬೆಳಗ್ಗೆ 10:30ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ, ಬಿಸಿಎ, ಬಿಸಿಎಸ್, ಎಂಸಿಎ, ಬಿಕಾಂ, ಬಿಎಸ್ಸಿ, ಎಂಎಸ್ಸಿ, ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ  ಹಾಗೂ ಆಧಾರ್‌ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳ ಬಹುದು.  

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿ ಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News