ಕುಂದಾಪುರ: ಪಿಯು ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

Update: 2022-12-09 14:54 GMT

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕುಂದಾಪುರ ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯುವ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಮಾತನಾಡಿ, ಕ್ರೀಡಾಕೂಟಗಳನ್ನು ಆಯೋಜಿಸುವ ಸಂದರ್ಭ ಗ್ರಾಮೀಣ ಭಾಗಗಳಿಂದ ಬರುವ ಕ್ರೀಡಾಳುಗಳಿಗೆ ಸೌಕರ್ಯ ಒದಗಿಸುವಲ್ಲಿ ಸರಕಾರ ವಿಫಲವಾಗಿದ್ದು ನೋವಿನ ಸಂಗತಿ. ಕ್ರೀಡಾಕೂಟ ಆಯೋಜಿಸುವಾಗ ನೀಡುವ ಪ್ರೋತ್ಸಾಹ ಕೂಡ ಬಾರಿ ಕಡಿಮೆಯಾಗಿದ್ದು ಈ ಬಗ್ಗೆ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಗಿದೆ. ಇನ್ನದರೂ ಸರಕಾರ ಈ ಬಗ್ಗೆ ಕ್ರಮವಹಿಸಬೇಕು ಎಂದರು.

ಪಂದ್ಯಾಟವನ್ನು ಪೇಜಾವರ ಮಠದ ಯತಿಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು. ಉದ್ಯಮಿ ಮಹೇಶ್ ಹೆಗ್ಡೆ ಮೊಳಹಳ್ಳಿ ಧ್ವಜಾ ರೋಹಣ ನೆರವೇರಿಸಿದರು. ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಅನುಜ್ ಕುಮಾರ್ ಪ್ರತಿಜ್ಞಾವಿಧಿ ಭೋದಿಸಿದರು.

ಇದೇ ಸಂದರ್ಭದಲ್ಲಿ ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಷ್ಟ್ರೀಯ ವಾಲಿಬಾಲ್ ಆಟಗಾರ ರೈಸನ್ ಬೆನೆಟ್ ರೆಬೆಲ್ಲೋ ಅವರನ್ನು ಸನ್ಮಾನಿಸಲಾಯಿತು. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಉದ್ಯಮಿ ಗಳಾದ ಮಹೇಶ ಹೆಗ್ಡೆ ಮೊಳಹಳ್ಳಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಸೌಕೂರು ಶ್ರೀೀ ದುರ್ಗಾಪರ ಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ಹೊಂಬಾಡಿ-ಮಂಡಾಡಿ ಗ್ರಾಪಂ ಅಧ್ಯಕ್ಷ ಸತೀಶ್ ಮಡಿವಾಳ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಶೆಟ್ಟಿ ಹರ್ಕೂರು, ಪಂದ್ಯಾಟದ ವೀಕ್ಷಕ ಮಹಾಂತೇಶ, ಕ್ರೀಡಾ ನಿರ್ದೇಶಕ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.

ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಸ್ವಾಗತಿಸಿದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ರಮೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸತೀಶ್ ಶೆಟ್ಟಿ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.

Similar News