ಡಿ.10ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ.ಕ.ಜಿಲ್ಲಾ ಪ್ರವಾಸ

Update: 2022-12-09 15:46 GMT

ಮಂಗಳೂರು, ಡಿ.9: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.10ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸಂಜೆ 6.05ಕ್ಕೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ 6:50ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ತಲುಪುವರು. ಬಳಿಕ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ರಾತ್ರಿ 8:30ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ ಹೊರಟು 9:15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News