ಕಾರ್ಕಳ | ಖಾಸಗಿ ಬಸ್, ಕಾರಿನ ನಡುವೆ ಅಪಘಾತ: ಒಂದೇ ಕುಟುಂಬದ ಮೂವರು ಮೃತ್ಯು

Update: 2022-12-10 03:57 GMT

ಕಾರ್ಕಳ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಕಾರ್ಕಳ ಬಜಗೋಳಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ

ಆಂಧ್ರಪ್ರದೇಶ ಮೂಲದ ಪತಿ, ಪತ್ನಿ  ಮತ್ತು ಮಗು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ  ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ

Similar News