ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ: ಪ್ರಕರಣ ದಾಖಲು
Update: 2022-12-10 10:32 IST
ಕಲಬುರಗಿ: ಮಾರಕಾಸ್ತ್ರಗಳಿಂದ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಾಲಗತ್ತಿ ಗ್ರಾಮದ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.