ಕ್ಯಾಲಿಕಟ್‌ನಿಂದ ದುಬೈಗೆ ತಲುಪಿದ ವಿಮಾನದಲ್ಲಿ ಹಾವು ಪತ್ತೆ: ಡಿಜಿಸಿಎ ತನಿಖೆ

Update: 2022-12-10 16:29 GMT

ಹೊಸದಿಲ್ಲಿ: ಶನಿವಾರ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವೊಂದು ಪತ್ತೆಯಾಗಿದ್ದು, ಘಟನೆಯ ಕುರಿತು ವಾಯುಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿ737-800 ವಿಮಾನವು ಕೇರಳದ ಕ್ಯಾಲಿಕಟ್‌ನಿಂದ ಹೊರಟಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ವರದಿಯಾಗಿದೆ.

ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಇದು ನಿರ್ವಹಣೆಯ ಲೋಪವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

Similar News