ವರಿಷ್ಠರು ಸೂಚಿಸಿದರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ಬಿ.ವೈ.ವಿಜಯೇಂದ್ರ

''ನರೇಂದ್ರ ಮೋದಿ ಎಂಬುದು ಬರೀ ಅಲೆ ಅಲ್ಲ, ಅದೊಂದು ಸುನಾಮಿ''

Update: 2022-12-11 09:57 GMT

ಮೈಸೂರು, ಡಿ.11: 'ನರೇಂದ್ರ ಮೋದಿ ಎಂಬುದು ಕೇವಲ  ಅಲೆಯಲ್ಲ, ಅದೊಂದು ಸುನಾಮಿ, ಕಾಂಗ್ರೆಸ್ ಮುಖಂಡರಿಗೆ ಇದು ಅರ್ಥವಾಗಿಲ್ಲ, ಏಕೆಂದರೆ ಆ ಪಕ್ಷದವರು ಭ್ರಮೆಯಲ್ಲಿದ್ದಾರೆ. ಆದ್ದರಿಂದಲೇ ಗುಜರಾತ್ ಫಲಿತಾಂಶದ ಪರಿಣಾಮವು ಕರ್ನಾಟಕದ ಚುನಾವಣೆ ಮೇಲೆ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಮುಂಬರುವ ಚುನಾವಣೆ ನಂತರ ಕಾಂಗ್ರೆಸ್ ಗೆ ಉತ್ತರ ಸಿಗಲಿದೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B. Y. Vijayendra) ಹೇಳಿದ್ದಾರೆ. 

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ, ಪಕ್ಷದ ಯಾವುದೇ ತೀರ್ಮಾನಕ್ಕೆ ನಾನು ಬದ್ಧ, ಒಂದು ವೇಳೆ ಕಾಂಗ್ರೆಸ್‌ ನಿಂದ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ, ಅದಕ್ಕೂ ನಾನು ಸಿದ್ಧನಾಗಿದ್ದೇನೆ' ಎಂದು ಹೇಳಿದರು.

'ನಾನು ವರುಣಾ ಕ್ಷೇತ್ರದಲ್ಲಷ್ಟೇ ಪಕ್ಷ ಸಂಘಟನೆ ಮಾಡುತ್ತಿಲ್ಲ, ನನಗೆ ಇಡೀ ರಾಜ್ಯದ ಬಗ್ಗೆ ಒಳವಿದೆ, ಹಳೇ ಮೈಸೂರು ಭಾಗದ ಎಲ್ಲಾ ಕ್ಷೇತ್ರಗಳಲ್ಲಿಯೂ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಎಚ್ಚು ಸ್ಥಾನಗಳನ್ನು ಗೆಲ್ಲಲಿದೆ' ಎಂದು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ: ಹೃದಯಾಘಾತದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರು ಚಾಲಕ ಮೃತ್ಯು 

Full View

Similar News