ಕರ್ನಾಟಕ ವಿಧಾನಸಭೆ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ

Update: 2022-12-12 11:01 GMT

ಹೊಸದಿಲ್ಲಿ: ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಆರಂಭವಾಗಿದೆ. 

ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ರಣತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಮಹತ್ವದ ಚರ್ಚೆ ನಡೆಸಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಸಲೀಮ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

Similar News