×
Ad

ಸುಳ್ಯ: ಮದುವೆ ದಿಬ್ಬಣದ ಕಾರು ಪಲ್ಟಿ; ತಾಯಿ, ಮಗು ಮೃತ್ಯು

ನಾಲ್ಕು ಮಂದಿಗೆ ಗಂಭೀರ ಗಾಯ

Update: 2022-12-12 17:31 IST

ಸುಳ್ಯ: ಕಾಸರಗೋಡು ಪರಪ್ಪೆ ಬಳಿ ಮದುವೆ ದಿಬ್ಬಣ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗು ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ 3 ವರ್ಷದ ಮಗು ಶಜಾ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. 

Similar News