ಬಿಲ್ಕಿಸ್ ಬಾನು ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ

Update: 2022-12-13 10:01 GMT

ಹೊಸದಿಲ್ಲಿ: 2002 ರಲ್ಲಿ ತನ್ನ ಸಾಮೂಹಿಕ ಅತ್ಯಾಚಾರ ಹಾಗೂ ತನ್ನ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು  ಅವರು ಸಲ್ಲಿಸಿರುವ  ಅರ್ಜಿಯನ್ನು ಡಿಸೆಂಬರ್ 13 ರಂದು ಆಲಿಬೇಕಿದ್ದ ಸುಪ್ರೀಂ ಕೋರ್ಟ್ ಪೀಠದ ಭಾಗವಾದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಇಂದು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಹಾಗಾಗಿ ಪ್ರಕರಣವನ್ನು ಮುಂದೂಡಲಾಗಿದ್ದು, ಹೊಸ ಪೀಠದಲ್ಲಿ ವಿಚಾರಣೆ ಪಟ್ಟಿ ಮಾಡಬೇಕಾಗಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಹಾಗೂ  ಬೇಲಾ ಎಂ.ತ್ರಿವೇದಿ ಅವರ ಪೀಠವು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ, ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ಸಹೋದರಿ ನ್ಯಾಯಾಧೀಶರು ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ನ್ಯಾಯಮೂರ್ತಿ ತ್ರಿವೇದಿ ಅವರ ನಿರಾಕರಣೆಗೆ ಯಾವುದೇ ಕಾರಣವನ್ನು ಪೀಠವು ಸ್ಪಷ್ಟಪಡಿಸಿಲ್ಲ.

Similar News