ಡಿ.17: ಕುಂದಾಪುರದ ಹಾರ್ದಳ್ಳಿ ಮಂಡಳ್ಳಿಯಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ
Update: 2022-12-13 20:38 IST
ಉಡುಪಿ, ಡಿ.13: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಡಿ.17ರ ಶನಿವಾರ ಬೆಳಗ್ಗೆ 10 ಗಂಟೆಗೆ ಕುಂದಾಪುರ ತಾಲೂಕು ಹಾರ್ದಳ್ಳಿ ಮಂಡಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ(ಪ್ರೌಢಶಾಲಾ ವಿಭಾಗ) ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಈ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಸಲ್ಲಿಸುವಂತೆ ಹಾಗೂ ಗ್ರಾಮಸ್ಥರು ಭಾಗವಹಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದು ಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.