×
Ad

ಮಂಗಳೂರು: ಡಿ.17ರಂದು ಉದ್ಯೋಗ ಮೇಳ

Update: 2022-12-13 20:47 IST

ಮಂಗಳೂರು, ಡಿ.13: ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರಕಾರದ ರಾಷ್ಟ್ರೀ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿಕೇಂದ್ರದಡಿ ಡಿ.17ರ ಬೆಳಗ್ಗೆ 10ರಿಂದ ಕಲ್ಲಡ್ಕದ ಶ್ರಿರಾಮ ವಿದ್ಯಾಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ೫೦ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಲಿದೆ. ಎಸೆಸೆಲ್ಸಿ,ಪಿಯುಸಿ, ಐಟಿಐ, ಡಿಪ್ಲೊಮಾ, ತಾಂತ್ರಿಕ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್ ಲಿಂಕ್ ಮೂಲಕ ಹೆಸರು ನೋಂದಾಯಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆನ್‌ಲೈನ್ ಮೂಲಕ ನೋಂದಾಯಿಸದಿರುವ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಬಹುದು. ಅಭ್ಯರ್ಥಿಗಳು ಕನಿಷ್ಟ 10 ಸ್ವಯಂ ವಿವರದ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಯ ಪ್ರಕಟನೆ ತಿಳಿಸಿದೆ.

Similar News