×
Ad

2018ರಲ್ಲಿ ನಡೆದಿದ್ದ ನಟ ದುನಿಯಾ ವಿಜಯ್- ಪಾನಿಪೂರಿ ಕಿಟ್ಟಿ ಗಲಾಟೆ ಪ್ರಕರಣಕ್ಕೆ ಮರುಜೀವ

Update: 2022-12-13 22:21 IST

ಬೆಂಗಳೂರು, ಡಿ.13: ನಟ ದುನಿಯಾ ವಿಜಯ್ ಹಾಗೂ ಜಿಮ್ ತರಬೇತುದಾರ ಪಾನಿಪೂರಿ ಕಿಟ್ಟಿ ಗಲಾಟೆ ಪ್ರಕರಣಕ್ಕೆ ಮರು ಜೀವ ಸಿಕ್ಕಿದ್ದು, ಪೊಲೀಸರು ವಿಚಾರಣೆ ಪ್ರಕ್ರಿಯೆ ಕೈಗೆತ್ತಿಕೊಂಡಿದ್ದಾರೆ. 

ಪ್ರಕರಣ ಸಂಬಂಧ ಮಂಗಳವಾರ ಇಲ್ಲಿನ ಸದಾಶಿವನಗರ ಎಸಿಪಿ ಕಚೇರಿಯಲ್ಲಿ ಪಾನಿಪೂರಿ ಕಿಟ್ಟಿ ವಿಚಾರಣೆಗೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸಿದರು ಎಂದು ತಿಳಿದುಬಂದಿದೆ.

2018ರಲ್ಲಿ ನಡೆದಿದ್ದ ಗಲಾಟೆ ಸಂಬಂಧ ಮಂಗಳವಾರ ಹೈಕೋರ್ಟ್ ಸೂಚನೆ ಮೇರೆಗೆಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯ್ ಪುತ್ರ ಸಾಮ್ರಾಟ್ ಮೇಲೆ ಕಿಟ್ಟಿ ಹಾಗೂ ಈತನ ಸಂಬಂಧಿ ಮಾರುತಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಕಾರಿನಲ್ಲಿ ಮಾರುತಿಯನ್ನು ನಟ ವಿಜಯ್ ಕರೆದೊಯ್ದು ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪರಸ್ಪರ ದೂರುಗಳು ದಾಖಲಾಗಿದ್ದವು.

ಸಾಕ್ಷ್ಯಾಧಾರಗಳ ಕೊರತೆಯಿಂದ ಮಾರುತಿ ಹಾಗೂ ಕಿಟ್ಟಿ ವಿರುದ್ಧದ ಪ್ರಕರಣ ಕೈಬಿಡಲಾಗಿತ್ತು. ಅದನ್ನು ಹೈಕೋರ್ಟ್‍ನಲ್ಲಿ ವಿಜಯ್ ಪ್ರಶ್ನಿಸಿದ್ದರು. ನ್ಯಾಯಾಲಯದ ಸೂಚನೆಯಂತೆ ಮತ್ತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

Similar News