ಕೊಡಗು ಜಿ.ಪಂ ಸಿಇಒ ದಂಪತಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Update: 2022-12-14 08:09 GMT

ಮಡಿಕೇರಿ ಡಿ.14 : ಆಹಾರದಲ್ಲಿ ವ್ಯತ್ಯಾಸವಾದ ಕಾರಣ ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಹಾಗೂ ಪತ್ನಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.

ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡಿದ ಬಳಿಕ ದಂಪತಿ ಅಸ್ವಸ್ಥಗೊಂಡ ಕಾರಣ ಮನೆಯಲ್ಲಿದ್ದವರು ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 

ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ಇಂದು ಇಬ್ಬರೂ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ತಕ್ಷಣ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. 

ಆಹಾರದಲ್ಲಿ ವ್ಯತ್ಯಾಸವಾದ ಕಾರಣ ಹೀಗೆ ಆಗಿದೆ ಎಂದು ಎಸ್‍ಪಿ ಮಾಹಿತಿ ನೀಡಿದರು. 
 

Similar News