×
Ad

ಹನೂರು: ಕೃಷಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Update: 2022-12-15 11:47 IST

ಹನೂರು, ಡಿ.15:  ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ಖಚಿತ ಮಾಹಿತಿ ಮೇರೆಗೆ ಜಮೀನಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಗಾಂಜಾ ಗಿಡ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಚಿಕ್ಕಮಾಲಾಪುರದಲ್ಲಿ ವರದಿಯಾಗಿದೆ.

ಹನುಮೇಗೌಡ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. 

ಚಿಕ್ಕಮಾಲಾಪುರ ಗ್ರಾಮದ ಸರೋಜಮ್ಮ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ವಲಯ ಅಬಕಾರಿ ನಿರೀಕ್ಷಕ ಸುನೀಲ್‌ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Similar News