ಮುಂಬೈ: ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ

Update: 2022-12-15 07:36 GMT

ಮುಂಬೈ: ಮುಂಬೈನ ಲೋವರ್ ಪರೇಲ್ ಪ್ರದೇಶದ ಬಹುಮಹಡಿ ವಸತಿ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ನಂದಿಸಲು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒನ್ ಅವಿಘ್ನಾ ಪಾರ್ಕ್‌ ಹೆಸರಿನ ವಸತಿ ಕಟ್ಟಡದ 14 ನೇ ಮಹಡಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಲೋವರ್ ಪರೇಲ್‌ನಲ್ಲಿರುವ ಭಾರತ್ ಮಾತಾ ಚಿತ್ರಮಂದಿರದ ಬಳಿ ಒನ್ ಅವಿಘ್ನ ಪಾರ್ಕ್ ಇದೆ.

Similar News