ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಹಲ್ಲೆ : ಆರೋಪಿ ಪೊಲೀಸ್ ವಶಕ್ಕೆ
Update: 2022-12-15 16:46 IST
ಉಡುಪಿ, ಡಿ.15: ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಅವರ ಪತಿಗೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಇಂದ್ರಾಳಿ ಸಮೀಪ ನಡೆದಿದೆ.
ತೀವ್ರವಾಗಿ ಗಾಯಗೊಂಡಿರುವ ಕೃಷ್ಣ ನಾಯ್ಕ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಹಲ್ಲೆಗೈದ ಆರೋಪಿ ಅರ್ಜುನ್ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಅರ್ಜುನ್ ಮನೆಗೆ ನುಗ್ಗಿ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ನಾಯ್ಕ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.