×
Ad

ಮ್ಯಾನೇಜ್‌ಮೆಂಟ್ ಫೆಸ್ಟ್: ಕೋಟ ವಿವೇಕ ಕಾಲೇಜಿಗೆ ಸಮಗ್ರ ಪ್ರಶಸ್ತಿ

Update: 2022-12-15 19:51 IST

ಕುಂದಾಪುರ, ಡಿ.15: ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಡಿ.13ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸ್ಪರ್ಧೆ ನೋವೇಶನ್ ಮ್ಯಾನೇಜ್‌ಮೆಂಟ್ ಫೆಸ್ಟ್‌ನಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.  

ಸಮಾರೋಪ ಸಮಾರಂಭ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿದರು.

ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ನಂದಾ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ವಿದ್ಯಾರ್ಥಿಗಳಾದ ಅಶ್ವಿತಾ ಹಾಗೂ ತ್ರಿನಿಶ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಚೇತನ್ ವಂದಿಸಿ, ಶೋಭಾ ಕಾರ್ಯಕ್ರಮ ನಿರೂಪಿಸಿದರು.

Similar News