×
Ad

ಬಸ್ ಪ್ರಯಾಣಿಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ: ಆಸ್ಪತ್ರೆಗೆ ಭೇಟಿ ನೀಡಿದ ಯು.ಟಿ. ಖಾದರ್

Update: 2022-12-15 22:34 IST

ಮಂಗಳೂರು : ಬಿಸಿ ರೋಡ್‌ ನಿಂದ ಮೂಡುಬಿದಿರೆಗೆ ʼಮಹಾ ಗಣೇಶ್ʼ ಎಂಬ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂಲಾರಪಟ್ನದ ಇಸಾಕ್ ಎಂಬವರನ್ನು ಬಸ್ಸಿನಿಂದ ಎಳೆದು ಹೊರ ಹಾಕಿದ ಸಂಘ ಪರಿವಾರದ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿದ್ದು, ಘಟನೆಯನ್ನು ಶಾಸಕ, ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಖಂಡಿಸಿದ್ದಾರೆ.

ಹಲ್ಲೆಗೊಳಗಾದ ಇಸಾಕ್ ಅವರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯು.ಟಿ.ಖಾದರ್ ಅವರು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕೆಂದು ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Similar News