ಜೆಡಿಎಸ್‌ನಿಂದ ಆಶಾನಿಲಯದಲ್ಲಿ ಕುಮಾರಸ್ವಾಮಿ ಜನ್ಮ ದಿನಾಚರಣೆ
Update: 2022-12-16 20:25 IST
ಉಡುಪಿ, ಡಿ.16: ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಂದು ಉಡುಪಿ ಆಶಾನಿಲಯದ ವಿಶೇಷ ಮಕ್ಕಳು ಹಾಗೂ ವಿಕಲಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಚರಿಸಲಾಯಿತು. ಕೇಕ್ ಕತ್ತರಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿ, ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಕಲ ಚೇತನ ಮಕ್ಕಳೊಂದಿಗೆ ಬೆರೆತು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕುಮಾರಸ್ವಾಮಿ ಅವರಿಗೆ ವಿಕಲಚೇತನ ಮಕ್ಕಳಲ್ಲಿ ಅತಿಯಾದ ಪ್ರೇಮ ಹಾಗೂ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ವಿಕಲಚೇತನ ಮಕ್ಕಳಿಗೆ ಕ್ಷೀರಭಾಗ್ಯ ಮತ್ತು ಇತರ ಕಾರ್ಯಕ್ರಮಗಳನ್ನು ನಾಡಿಗೆ ನೀಡಿದ್ದರು ಎಂದು ಹೇಳಿದರು. ಜೆಡಿಎಸ್ ಪಕ್ಷದ ವತಿಯಿಂದ ಆಶಾ ನಿಲಯದ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಆಶಾ ನಿಲಯದ ಎಚ್‌ಎಂ ಶಶಿಕಲಾ ಕೋಟ್ಯಾನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ, ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಹಿಳಾ ಅಧ್ಯಕ್ಷ ಶಾಲಿನಿ ಆರ್ ಶೆಟ್ಟಿ ಕೆಂಚನೂರು, ಜಿಲ್ಲಾ ಯುವ ನಾಯಕ ಸಂಜಯ್ ಕುಮಾರ್, ದಕ್ಷಿತ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಲಿಮಾರು ಮುಂತಾದವರು ಉಪಸ್ಥಿತರಿದ್ದರು.