×
Ad

ಮಣಿಪಾಲದಲ್ಲಿ ಬೈಕ್ ಅಪಘಾತ: ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ

Update: 2022-12-16 21:25 IST

ಮಣಿಪಾಲ, ಡಿ.16: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಸಮೀಪ ಡಿ.16ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಸಹಸವಾರ ಶಿವಮೊಗ್ಗದ ನಿಖಿಲ್ (23) ಎಂದು ಗುರುತಿಸ ಲಾಗಿದೆ. ಸವಾರ ನಿಹಾಲ್ ಹಾಗೂ ಇನ್ನೊರ್ವ ಸಹಸವಾರ ಮಹೇಂದ್ರ ಜಿ. ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರು ಮೂವರು ಮಣಿಪಾಲ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಟೆಕ್ ವಿದ್ಯಾರ್ಥಿಗಳಾಗಿದ್ದಾರೆ.

ಇವರು ಮೂವರು ಒಂದು ಬೈಕಿನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ನಿಂತ್ರಯಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಮೂವರು ರಸ್ತೆಗೆ ಬಿದ್ದಿದ್ದು, ಇವರಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ನಿಖಿಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News