×
Ad

ಮುಂದಿನ ಚುನಾವಣೆಯಲ್ಲಿ ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ

Update: 2022-12-16 23:43 IST

ಬೆಂಗಳೂರು, ಡಿ. 16: ‘ಕೊಪ್ಪಳ ಜಿಲ್ಲೆಯ ಜನ ನನ್ನ ಬಗ್ಗೆ ಅಪಾರ ಪ್ರೀತಿ ಹಾಗೂ ಗೌರವವನ್ನು ಇಟ್ಟುಕೊಂಡಿದ್ದು ಅವರ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ. ಮುಂದಿನ ಚುನಾವಣೆಗೆ ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ನೀವು ಆಹ್ವಾನ ನೀಡಿದ್ದಾರೆ. ಆದರೆ, ನಾನು ಇಲ್ಲಿಂದ ಸ್ಪರ್ಧಿಸುವುದಿಲ್ಲ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಕೊಪ್ಪಳ ನಗರದಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಇನ್ನೂ ತೀರ್ಮಾನ ಮಾಡಿಲ್ಲ. ಹಲವು ಕ್ಷೇತ್ರಗಳಿಂದ ನಮ್ಮ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿ ಆಹ್ವಾನ ನೀಡುತ್ತಿದ್ದಾರೆ ಎಂದರು.

‘1991ರ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇಥ್ರದಿಂದ ಸ್ಪರ್ಧೆ ಮಾಡಿದ ಸಂದರ್ಭದಲ್ಲಿ ಕ್ಷೇತ್ರದ ಅನೇಕರು ನನ್ನ ಪರ ಕೆಲಸ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯೊಂದಿಗೆ ನನಗೆ ಅವಿನಾಭಾವ ಸಂಬಂಧ ಇದೆ’ ಎಂದು ಸಿದ್ಧರಾಮಯ್ಯ ಇದೇ ವೇಳೆ ನೆನಪು ಮಾಡಿಕೊಂಡರು.

Similar News