ಮುಲ್ಕಿ: ಯುವಕನಿಗೆ ತಂಡದಿಂದ ಹಲ್ಲೆ
Update: 2022-12-17 16:15 IST
ಮುಲ್ಕಿ, ಡಿ.17: ತಂಡವೊಂದು ಯುವಕನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕೆರೆಕಾಡು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.
ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಹಲ್ಲೆಗೊಳಗಾದ ಯುವಕ. ಹಲ್ಲೆಯಿಂದ ಗಾಯಗೊಂಡ ಯುವಕನನ್ನು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ.