ಮಂಗಳೂರು ವಿವಿ ಶೈಕ್ಷಣಕ ಸಮಸ್ಯೆ: ಸಹಿ ಸಂಗ್ರಹ ಅಭಿಯಾನ
ಉಡುಪಿ, ಡಿ.17: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸಮಸ್ಯೆ ಗಳನ್ನು ಪರಿಹರಿಸುವಂತೆ ಆಗ್ರಹಿಸಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿ ಗಳು ಇಂದು ಸಹಿ ಸಂಗ್ರಹ ಅಭಿಯಾನ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಂಗಳೂರು ವಿವಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕ ಪಟ್ಟಿ ನೀಡದೆ ಸತಾಯಿಸುತ್ತಿರುವುದ ರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಸಮಸ್ಯೆ ಯಾಗಿದೆ. ಅಂಕಪಟ್ಟಿ ಬರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಆಗದೆ ವಿದ್ಯಾರ್ಥಿಗಳು ಇಕ್ಕಟ್ಟಿನಲ್ಲಿ ಸಿಲುಕ್ಕಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.
ಮೌಲ್ಯ ಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೆ ಇರುವುದು, ಮರು ಪರೀಕ್ಷೆ ಹಾಗೂ ಮರು ಮೌಲ್ಯಮಾಪನ ಗಳಲ್ಲಿ ಗೊಂದಲ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಮಕ್ಕಳಲ್ಲಿ ಆತಂಕ ಸೃಷ್ಠಿಸಿದೆ. ಮಂಗಳೂರು ವಿವಿಯ ಬೇಜವಾಬ್ದಾರಿ ತನದಿಂದ ಮಕ್ಕಳು ಮತ್ತು ಪೋಷಕರು ತಲೆತಗ್ಗಿಸುವಂತಾಗಿದೆ ಎಂದು ಮನವಿ ಯಲ್ಲಿ ಆರೋಪಿಸಲಾಗಿದೆ.
ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆದ ಅಭಿಯಾನದಲ್ಲಿ ಸುಮಾರು 500 ವಿದ್ಯಾರ್ಥಿಗಳು ಸಹಿ ಮಾಡಿದರು. ಮನವಿಯನ್ನು ಅಪರ ಜಿಲ್ಲಾಧಿಕಾರಿ ವೀಣಾ ಸ್ವೀಕರಿಸಿದರು. ಈ ಸಂದರ್ಭ ದಲ್ಲಿ ವಿದ್ಯಾರ್ಥಿ ಮುಖಂಡರಾದ ಧನುಷ್, ಅನುರೂಪ್, ಯತೀಶ್, ವಿಜೇತ, ಅನಘ ಮೊದಲಾದವರು ಉಪಸ್ಥಿತರಿದ್ದರು.