ಉಡುಪಿ: ಬುಲೆಟ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು

Update: 2022-12-17 14:36 GMT

ಉಡುಪಿ : ಬುಲೆಟ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಪಡುಅಲೆವೂರು ನಿವಾಸಿ ವನಿತಾ (50) ಎಂದು ಗುರುತಿಸಲಾಗಿದೆ. ಡಿ.11ರಂದು ರಾಕೇಶ್ ಭಟ್ ಎಂಬವರು ಬುಲೆಟ್‌ನಲ್ಲಿ ತನ್ನ ತಾಯಿಯನ್ನು ಕರೆದುಕೊಂಡು ಕೃಷ್ಣಮಠಕ್ಕೆ ಕಾರ್ಯಕ್ರಮದ ನಿಮಿತ್ತ ಹೋಗುತ್ತಿದ್ದರು. ಈ ವೇಳೆ ವಿದ್ಯೋದಯ ಶಾಲೆಯ ಬಳಿ ಹಿಂಬದಿಯಲ್ಲಿದ್ದ ವನಿತಾ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು, ಡಿ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News