ಅಮೆರಿಕ: ಶಾಲೆ ಬಳಿ ಗುಂಡಿನ ದಾಳಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

Update: 2022-12-17 18:44 GMT

ವಾಷಿಂಗ್ಟನ್: ಅಮೆರಿಕದ ಚಿಕಾಗೊ ನಗರದ ಶಾಲೆಯೊಂದರ ಬಳಿ ಶುಕ್ರವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

 ಚಿಕಾಗೊದ ಬೆನಿಟೊ ಜುವಾರೆರ್ ಹೈಸ್ಕೂಲ್ ಬಳಿ ಗುಂಡಿನ ದಾಳಿ ನಡೆದಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಹುಡುಗಿ ಸಹಿತ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಚಿಕಾಗೊ ಪೊಲೀಸ್ ಸೂಪರಿಂಟೆಂಡೆಂಟ್ ಡೇವಿಡ್ ಬ್ರೌನ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ.

Similar News