ಕಲಬುರಗಿ: ರಸ್ತೆ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತ್ಯು
Update: 2022-12-18 23:25 IST
ಕಲಬುರಗಿ: ಜೇವರ್ಗಿ ಪಟ್ಟಣದ ಸಮೀಪ ಬೀದರ್- ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ ಆಕಾಶ ಮಾಹಾದೇವಪ್ಪ ನಾಕ್ಮನ (25) ಮೃತ ಯುವಕ ಎಂದು ತಿಳಿದು ಬಂದಿದೆ.
ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಆಟೋದ ಮುಂಭಾಗ ಜಖಂಗೊಂಡಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಜೇವರ್ಗಿ ಪೊಲೀಸ್ ಠಾಣೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಮೃತನ ಶವವನ್ನು ಆಂಬುಲೆನ್ಸ್ ಮೂಲಕ ಜೇವರ್ಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.